ಅಕ್ರಮ ಗೋ ಸಾಗಾಟ ಪ್ರಕರಣ : ಇಬ್ಬರು ಆರೋಪಿಗಳು ಸೆರೆ
Update: 2020-09-04 21:38 IST
ಪುತ್ತೂರು: ಕಾರೊಂದರಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪುತ್ತೂರು ನಗರ ಠಾಣೆ ಪೊಲೀಸರು ಕಾರು ಮತ್ತು ಜಾನುವಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಸರಗೋಡು ಬಂದಡ್ಕ ಪಾಲಾರ್ ನಿವಾಸಿ ಶಿವಪ್ರಸಾದ್ ಭಟ್ (51) ಮತ್ತು ಬಂದಡ್ಕ ಮಾಣಿಮೂಲೆ ನಿವಾಸಿ ಚಂದ್ರನ್ ಟಿ (34) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಜಾನುವಾರನ್ನು ಕೇರಳಕ್ಕೆ ಸಾಗಾಟ ಮಾಡಲಾಗುತ್ತಿರುವ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಆರೋಪಿಗಳು ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿದ ಪೊಲೀಸರು ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.