ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 'ಅರಿವು' ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು, ಸೆ.4: 2020-21ನೆ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್‍ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdc.kar.nic.in/Arivu2 'ಆನ್‍ಲೈನ್' ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ.18. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಕ್ರೋಡೀಕೃತ ಮಾಹಿತಿಗಳನ್ನು ಕೇಂದ್ರ ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ ಸೆ.20 ಆಗಿದೆ.
ಅರಿವು ವೆಬ್‍ಸೈಟ್ www.kmdc.kar.nic.in/Arivu2 ನಲ್ಲಿ ವಿದ್ಯಾರ್ಥಿಗಳು 'ಆನ್ ಲೈನ್' ಮುಖಾಂತರ ಅರ್ಜಿ ಸಲ್ಲಿಸಿ ಅದರ ಹಾರ್ಡ್ ಕಾಪಿಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ವಿಶ್ವೇಶ್ವರಯ್ಯ ಕೇಂದ್ರ 12 ನೇ ಮಹಡಿ, ಮುಖ್ಯ ಗೋಪುರ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-1, ದೂರವಾಣಿ ಸಂಖ್ಯೆ: 080-22864782 ವಿಳಾಸಕ್ಕೆ ಸಂಪರ್ಕಿಸಬಹುದಾಗಿದೆ.
ಬೆಂಗಳೂರು ನಗರ ಹಾಗೂ ಉತ್ತರ ವಿಭಾಗಕ್ಕೆ ಸಂಬಂಧಪಟ್ಟವರು 4 ನೇ ಮುಖ್ಯ ರಸ್ತೆ, 2 ನೇ ಅಡ್ಡ ರಸ್ತೆ, ವಸಂತಪ್ಪ ಬ್ಲಾಕ್, ಗಂಗಾನಗರ, ಬೆಂಗಳೂರು -32 ಹಿಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ ಬೆಂಗಳೂರು-32, ದೂರವಾಣಿ ಸಂಖ್ಯೆ: 23539786 ಸಂಪರ್ಕಿಸಬಹುದಾಗಿದೆ.
ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವ ಕೊನೆಯ ದಿನಾಂಕ ಸೆ.18. ಸಿಇಟಿ/ನೀಟ್ ಪರೀಕ್ಷಾ ಪ್ರವೇಶ ಪ್ರತಿ/ ಸಿಇಟಿ ಆರ್ಡರ್ ಪ್ರತಿಗಳನ್ನು ಪಡೆಯಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.