×
Ad

ಅಂಬೇಡ್ಕರ್ ಪುತ್ಥಳಿಗೆ ಅಪಮಾನ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಂದಗಡದಲ್ಲಿ ಪ್ರತಿಭಟನೆ

Update: 2020-09-04 22:15 IST

ಬೆಂಗಳೂರು, ಸೆ. 4: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಕೆಲ ಕಿಡಿಗೇಡಿಗಳಿಂದ ಅವಮಾನ ಮಾಡಿದ್ದನ್ನು ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ನಂದಗಡ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಇದನ್ನು ಖಂಡಿಸಿ ನಂದಗಡ ಗ್ರಾಮದಲ್ಲಿ ವಿವಿಧ ದಲಿತ ಸಂಘಟನೆಗಳು ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನಿನ ಅನ್ವಯ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ನಂದಗಡ ಕ್ರಾಸ್‍ನಿಂದ ಮೆರವಣಿಗೆ ಮೂಲಕ ಅಂಬೇಡ್ಕರ್ ವೃತ್ತಕ್ಕೆ ಬಂದ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. 'ಜಬ್ ತಕ್ ಸೂರಜ್ ಚಾಂದ್ ರಹೇಗಾ ಬಾಬಾ ಸಾಹೇಬ ತುಮಾರಾ ನಾಮ್ ರಹೇಗಾ, ಬೇಕೇ ಬೇಕು ನ್ಯಾಯ ಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ' ಎಂದು ಘೋಷಣೆ ಕೂಗಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ನಂದಗಡ ಗ್ರಾಮದಲ್ಲಿನ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು, ಜೈ ಭೀಮ್, ಜೈ ಭೀಮ್ ಎಂಬ ಘೋಷಣೆಗಳು ಮುಗಿಲು ಮುಟ್ಟಿದ್ದವು. ಇದೇ ವೇಳೆ ಸರಕಾರದ ವಿರುದ್ಧವೂ ಪ್ರತಿಭಟನಾಕಾರರು ಘೋಷಣೆ ಕೂಗಿದಲ್ಲದೆ, ತಕ್ಷಣವೇ ಆರೋಪಿಗಳನ್ನು ಬಂಧಿಸಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News