ಡ್ರಗ್ಸ್ ದಂಧೆಯಲ್ಲಿ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಿ: ಎಂ.ಬಿ.ಪಾಟೀಲ್

Update: 2020-09-04 16:55 GMT

ಬೆಂಗಳೂರು, ಸೆ.4: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗಬೇಕು ಎಂದು ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಒತ್ತಾಯಿಸಿದ್ದಾರೆ.

ಶುಕ್ರವಾರ ಇಲ್ಲಿನ ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಶ್ರೀಮಂತರು, ರಾಜಕಾರಣಿಗಳ ಮಕ್ಕಳು ಇರಬಹುದು. ಹಾಗಂತ ಅವರಿಗೇನು ವಿಶೇಷ ರಿಯಾಯಿತಿ ಇಲ್ಲ. ಯಾರೇ ಇರಲಿ ಕ್ರಮ ಅನಿವಾರ್ಯವಾಗಬೇಕು ಎಂದರು.

ಕೆಲ ವೆಬ್‍ಸೈಟ್‍ಗಳ ಮೂಲಕ ಡ್ರಗ್ಸ್ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸಬೇಕು ಎಂದ ಅವರು, ಹೊಸ ದಿಲ್ಲಿ, ಮುಂಬೈ, ಪಂಜಾಬ್‍ನಲ್ಲಿ ಡ್ರಗ್ಸ್ ಹಾವಳಿ ಹೆಚ್ಚು. ಇತ್ತೀಚೆಗೆ ಬೆಂಗಳೂರಿನಲ್ಲೂ ಕೂಡ ಹೆಚ್ಚಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News