ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಪತ್ನಿಗೆ ಕೊರೋನ ಪಾಸಿಟಿವ್

Update: 2020-09-05 12:08 GMT

ಬೆಂಗಳೂರು, ಸೆ. 5: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮತ್ತವರ ಪತ್ನಿಗೆ ಕೋವಿಡ್ ಸೋಂಕು ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಇಬ್ಬರೂ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, `ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್ ಬಂದಿದೆ. ಯಾವುದೇ ರೋಗದ ಲಕ್ಷಣಗಳಿಲ್ಲದ ಕಾಣರ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್‍ನಲ್ಲಿದ್ದು ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ,ಹಾರೈಕೆಯಿಂದ ಶೀಘ್ರ ಗುಣಮುಖವಾಗಿ ವಿಶ್ವಾಸವಿದೆ' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News