ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2020-09-05 13:36 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.5: ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಜೊತೆಗೆ ಸಾಧಾರಣ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರದಂದು ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲವಾಗಿದೆ. ಕರಾವಳಿ ಜಿಲ್ಲೆ ಹಾಗೂ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. 

ಚಿಕ್ಕಮಗಳೂರು ಜಿಲ್ಲೆಯ ಜಯಪುರದಲ್ಲಿ 6 ಸೆಂ.ಮೀ, ಹಾಸನ 5 ಸೆ.ಮೀ, ಶೃಂಗೇರಿ, ಬಾಳೆಹೊನ್ನೂರು, ಲಿಂಗನಮಕ್ಕಿ, ಹುಂಚದಕಟ್ಟೆ, ಶಿರ್ಲಕೊಪ್ಪ, ಹೊಸನಗರ, ನುಗ್ಗೆಹಳ್ಳಿ ಹಾಗೂ ಚಾಮರಾಜನಗರದಲ್ಲಿ ತಲಾ 4 ಸೆಂ.ಮೀ, ಸಿದ್ಧಾಪುರ, ತಿಪಟೂರು, ಕೊಣನೂರ್, ಸೋಮವಾರಪೇಟೆ ಹಾಗೂ ಕೊಪ್ಪದಲ್ಲಿ 3 ಸೆಂ.ಮೀ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಬಹುದು. ವಾತಾವರಣದ ಉಷ್ಣತೆ 29ರಿಂದ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News