ಶಿಕ್ಷಣ ಸಚಿವರ ಮನೆ ಮುಂದೆ ವಿಶೇಷ ಪ್ಯಾಕೇಜ್‍ಗೆ ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರಿಂದ ಪ್ರತಿಭಟನೆ
Update: 2020-09-05 19:09 IST
ಬೆಂಗಳೂರು, ಸೆ.5: ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಆರೋಗ್ಯ ವಿಮೆ ನೀಡುವಂತೆ ಹಾಗೂ ಮಲತಾಯಿ ಧೋರಣೆ ನಿಲ್ಲಿಸುವಂತೆ ಆಗ್ರಹಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನೆ ಮುಂದೆ ಖಾಸಗಿ ಶಾಲಾ ಶಿಕ್ಷಕರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ಕೊರೋನ ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸುಮಾರು 6 ತಿಂಗಳಿನಿಂದ ಶಿಕ್ಷಣ ಸಂಸ್ಥೆಗಳು ತತ್ತರಿಸಿ ಹೋಗಿವೆ. ವೇತನವಿಲ್ಲದ ಕಾರಣ, ಸುಮಾರು 4.50 ಲಕ್ಷ ಅನುದಾನ ರಹಿತ ಶಾಲಾ ಶಿಕ್ಷಕರು ಜೀವನ ನಡೆಸಲು ಕಷ್ಟಕರ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಮತ್ತು ಅತಿಥಿ ಉಪನ್ಯಾಸಕರಿಗೆ ಸವಲತ್ತು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಭಟನಾಕಾರರನ್ನು ಭೇಟಿ ಮಾಡಿ, ಅವರೊಂದಿಗೆ ಚರ್ಚಿಸಿ, ಕೂಡಲೇ ಶಿಕ್ಷಣ ಇಲಾಖೆ ತೆಗೆದುಕೊಳ್ಳಬಹುದಾದ ಕೆಲ ಕ್ರಮಗಳ ಕುರಿತು ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ.