ನೂತನ ಶಿಕ್ಷಣ ನೀತಿ ಅನುಷ್ಠಾನಗೊಳಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ಕಾರಿಂಜೆ

Update: 2020-09-05 15:52 GMT

ಶಿರ್ವ, ಸೆ.5: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದ ಐಎಸ್‌ಟಿಇ ಘಟಕದ ಸಹಯೋಗದೊಂದಿಗೆ ಇಂದು ಶಿಕ್ಷಕರ ದಿನಾಚರಣೆಯನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ ಕಾರಿಂಜೆ ಮಾತನಾಡಿ, ಬದಲಾದ ಕಾಲಘಟ್ಟದಲ್ಲಿ ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮತ್ತು ಜವಾಬ್ದಾರಿಗಳು ಮಹತ್ತರವಾಗಿದೆ ಎಂದರು.

ಅಧ್ಯಕ್ಷತೆಯನ್ನು ಸೋದೆವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿದ ನಿವೃತ್ತ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಕೆ.ಶ್ರೀನಿವಾಸನ್ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಕರ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಅಶೋಕ್ ಕಾಮತ್, ಕಾಲೇಜಿನ ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಉಪಸ್ಥಿತರಿ ದ್ದರು. ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರ್ಯುಶ್ರೀ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News