ಜಪ್ಪಿನಮೊಗರು: ಶಿಕ್ಷಕರ ದಿನಾಚರಣೆ-ಸಾಧಕ ಶಿಕ್ಷಕರಿಗೆ ಸನ್ಮಾನ
ಮಂಗಳೂರು, ಸೆ.5: ಮಗುವನ್ನು ಯಾವ ರೀತಿ ಬೆಳೆಸಬೇಕೆಂದು ಹೆತ್ತವರು ಯೋಚಿಸಿದರೆ ಮಗುವಿನ ಜನನದ ಬಳಿಕ ಎಲ್ಲಾ ಹಂತದಲ್ಲೂ ಶೈಕ್ಷಣಿಕ ಮತ್ತು ಇತರ ಎಲ್ಲಾ ರೀತಿಯಲ್ಲೂ ಮಾರ್ಗದರ್ಶನ ನೀಡಿ ತಪ್ಪುಗಳನ್ನು ತಿಳಿಸಿ ತಿದ್ದುವ ಮೂಲಕ ಸತ್ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರಾಗಿದ್ದಾರೆ ಎಂದು ಜಿಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಅಭಿಪ್ರಾಯಪಟ್ಟರು.
ದ.ಕ.ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಶನಿವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಸಾಧಕ ಶಿಕ್ಷಕರಾದ ರೋಹಿದಾಸ್ ಮತ್ತು ಗೋಪಾಲ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.
ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮಂಗಳೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಂ ಹರೇಕಳ, ಕಾರ್ಯದರ್ಶಿ ಲಿಲ್ಲಿ ಪಾಯಸ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸ್ಟ್ಯಾನಿ ತಾವ್ರೋ ಮನಪಾ ಸದಸ್ಯೆ ವೀಣಾ ಮಂಗಳ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜಲಕ್ಷ್ಮಿ ಸ್ವಾಗತಿಸಿದರು. ಕೆಎಂಕೆ ಮಂಜನಾಡಿ ವಂದಿಸಿದರು. ಮೋಹನ್ ಶಿರ್ಲಾಲ್ ಮತ್ತು ಪ್ರತೀಪ್ ಕಾರ್ಯಕ್ರಮ ನಿರೂಪಿಸಿದರು.