ಐಪಿಎಲ್ ವೇಳಾಪಟ್ಟಿ ಇಂದು ಬಿಡುಗಡೆ

Update: 2020-09-05 18:36 GMT

ದುಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಟ್ವೆಂಟಿ-20 ಟೂರ್ನಮೆಂಟ್‌ನ ವೇಳಾಪಟ್ಟಿಯು ರವಿವಾರ (ಸೆ.6) ಬಿಡುಗಡೆಯಾಗಲಿದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಶನಿವಾರ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಈ ವರ್ಷದ ಐಪಿಎಲ್ ಟೂರ್ನಿಯು ಸೆಪ್ಟಂಬರ್ 19ರಿಂದ ಆರಂಭವಾಗಿ ನವೆಂಬರ್ 10ರ ತನಕ ಯುಎಇಯ ಮೂರು ಸ್ಥಳಗಳಾದ-ದುಬೈ, ಅಬುಧಾಬಿ ಹಾಗೂ ಶಾರ್ಜಾಗಳಲ್ಲಿ ನಡೆಯಲಿದೆ. ತಮ್ಮ ನೆಚ್ಚಿನ ತಂಡಗಳು ಯಾವ ದಿನದಂದು ಆಡುತ್ತವೆ ಎಂದು ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News