'ಡ್ರಗ್ಸ್ ದಂಧೆ': ನೆರೆ ರಾಜ್ಯಗಳ ಗಡಿಗಳಲ್ಲಿ ಕಟ್ಟೆಚ್ಚರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ

Update: 2020-09-05 18:34 GMT

ಬೆಂಗಳೂರು, ಸೆ. 5: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ದೃಷ್ಟಿಯಿಂದ ಹೊರ ರಾಜ್ಯ ಹಾಗೂ ದೇಶ ವಿವಿಧ ಭಾಗಗಳಿಂದ ಕರ್ನಾಟಕಕ್ಕೆ ಡ್ರಗ್ಸ್ ಸಾಗಾಣಿಕೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ನೆರೆ ರಾಜ್ಯಗಳ ಗಡಿಯಲ್ಲಿ ಸೂಕ್ತ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ.

ಶನಿವಾರ ರಾಜ್ಯದಲ್ಲಿನ ಮಾದಕ ದ್ರವ್ಯ ನಿಗ್ರಹ ದೃಷ್ಟಿಯಿಂದ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಟಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು ಮತ್ತು ವಲಯಗಳ ಐಜಿಪಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಗೋವಾ, ತಮಿಳುನಾಡು ಹಾಗೂ ಕೇರಳ ಸೇರಿ ನೆರೆ ರಾಜ್ಯಗಳ ಗಡಿ ಭಾಗಗಳಲ್ಲಿ ಮಾದಕ ದ್ರವ್ಯ ಕಳ್ಳ ಸಾಗಾಣೆ ಬಗ್ಗೆ ನಿಗಾ ವಹಿಸಲು ಸೂಚನೆ ನೀಡಿದರು.

ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ನೆರೆ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಜಂಟಿ ಕಾರ್ಯಾಚರಣೆ ನಡೆಸಬೇಕು. ಆನ್‍ಲೈನ್ ವಹಿವಾಟು ಮತ್ತು ಕೊರಿಯರ್ ಸೇವೆಗಳ ಮೂಲಕ ರಾಜ್ಯಕ್ಕೆ ಡ್ರಗ್ ಪೂರೈಕೆಯಾಗುತ್ತಿಗುತ್ತಿದ್ದು, ಮಾದಕ ದ್ರವ್ಯ ಕಳ್ಳ ಸಾಗಾಣೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಈ ಕೃತ್ಯದಲ್ಲಿರುವವರ ಬಗ್ಗೆ ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.

ಜೊತೆಗೆ ಮತ್ತು ಭರಿಸುವ ಔಷಧಗಳು ಯಾವುದೇ ಕಾರಣಕ್ಕೂ ದುರ್ಬಳಕೆ ಆಗದಂತೆ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಔಷಧ ನಿಯಂತ್ರಕರ ಜೊತೆಗೂಡಿ ಪೊಲೀಸರು ಕಾರ್ಯ ನಿರ್ವಹಿಸಬೇಕು. ರಾಜ್ಯದಲ್ಲಿ ಗಾಂಜಾ ಬೆಳೆಯುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಶೋಧ ಕಾರ್ಯ ಕೈಗೊಳ್ಳಬೇಕು. ಗಾಂಜಾ ಬೆಳೆಯನ್ನು ರಾಜ್ಯದಲ್ಲಿ ಸಂಪೂರ್ಣ ನಾಶ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

'ರಾಜ್ಯದಲ್ಲಿನ ಮಾದಕ ದ್ರವ್ಯ(ಡ್ರಗ್ಸ್) ದಂಧೆಯನ್ನು ಬೇರು ಸಮೇತ ಕಿತ್ತುಹಾಕಬೇಕು. ಮಾದಕ ವಸ್ತು ಬಳಕೆ, ಕಳ್ಳ ಸಾಗಾಣೆ, ಮಾರಾಟ ಪ್ರಕರಣಗಳಲ್ಲಿ ಬಂಧಿತರಾಗುವ ತಪ್ಪಿತಸ್ಥರ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಲು ಪ್ರಾಸಿಕ್ಯೂಷನ್ ಅಧಿಕಾರಿಗಳಿಗೆ ಪೆÇಲೀಸ್ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು. ಈ ದಂಧೆಯನ್ನು ಮಟ್ಟ ಹಾಕಬೇಕು'
-ಬಸವರಾಜ ಬೊಮ್ಮಾಯಿ ಗೃಹ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News