ಮಧ್ಯಾಹ್ನದ ಬಿಸಿಯೂಟ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತಲುಪಲಿ

Update: 2020-09-06 11:39 GMT

ಬೆಂಗಳೂರು, ಸೆ. 6: ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಪ್ರಾರಂಭವಾಗದೆ ಇರುವುದರಿಂದ ಮಧ್ಯಾಹ್ನದ ಬಿಸಿಯೂಟವನ್ನು ವಿದ್ಯಾರ್ಥಿಗಳ ಮನೆಗಳಿಗೆ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡಬೇಕೆಂದು ಬೆಂಗಳೂರು ಕೇಂದ್ರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶೇಖರ್ ಸರಕಾರವನ್ನು ಒತ್ತಾಯಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಲೆ ಬಿಟ್ಟ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿ ಪೋಷಕರ ಮನವೊಲಿಸಿ ಅವರನ್ನು ಮರಳಿ ಶಾಲೆಗೆ ಕರೆತರುವ ಯೋಜನೆ ರೂಪಿಸಬೇಕಾಗಿದೆ. ಇದಕ್ಕೆ ಪ್ರೇರಿಕವಾಗಿ ಮಧ್ಯಾಹ್ನದ ಬಿಸಿಯೂಟವನ್ನು ವಿದ್ಯಾರ್ಥಿಗಳ ಮನೆಗಳಿಗೆ ತಲುಪಿಸಬೇಕೆಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗದಲ್ಲಿರುವವರಿಗೆ ಆರ್ಥಿಕ ಪರಿಹಾರ ಪ್ಯಾಕೇಜ್ ಒದಗಿಸುವ ನಿಟ್ಟಿನಲ್ಲಿ ಸರಕಾರ ವಿಶೇಷ ಕಾರ್ಯಕ್ರಮವನ್ನು ಯೋಜಿಸಬೇಕು. ಹಾಗೂ ಕೊರೋನ ವಿರುದ್ದ ಪ್ರಾಣ ಕಳೆದುಕೊಂಡ ಶಿಕ್ಷಕರಿಗೆ ಪರಿಹಾರ ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಕೋವಿಡ್‍ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳಿಗೆ ಬಡ್ಡಿ ರಹಿತ ಸಾಲ, ತೆರಿಗೆಯಲ್ಲಿ ವಿನಾಯಿತಿ ನೀಡಬೇಕು.

ಆ ಮೂಲಕ ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಶಾಲಾ ಶುಲ್ಕ ಕಡಿಮೆ ಮಾಡುವ ಒತ್ತಡವನ್ನು ಸರಕಾರ ಖಾಸಗಿ ಸಂಸ್ಥೆಗಳ ಮೇಲೆ ಹೇರಬೇಕೆಂದು ಅವರು ಆಗ್ರಹಿಸಿದರು. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ತಂತ್ರಜ್ಞಾನ ಬಳಸಿಕೊಳ್ಳಬೇಕು. ಇದರ ಜೊತೆಗೆ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಿಕೆ ಮಾಡಲು ರಾಜ್ಯ ಸರಕಾರ ಪ್ರಯತ್ನಸುತ್ತಿದೆ
ಯಾವುದೇ ಕಾರಣಕ್ಕೆ ವಾರ್ಡ್‍ಗಳ ಸಂಖ್ಯೆ ಹೆಚ್ಚಾದರು ಸರಿಯೇ ಚುನಾವಣೆಗಳನ್ನು ಕಡ್ಡಾಯವಾಗಿ ಪ್ರಜಾಸತಾತ್ಮಕವಾಗಿ ಸರಿಯಾದ ಸಮಯದಲ್ಲಿ ನಡೆಸಲೇಬೇಕು. ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗಲಿದ್ದೇವೆ.
-ಜಿ.ಕೃಷ್ಣಪ್ಪ. ಅಧ್ಯಕ್ಷ, ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News