ಬ್ರಹ್ಮಾವರ ಸಮುದಾಯ ಕೇಂದ್ರಕ್ಕೆ ಅಂಬ್ಯುಲೆನ್ಸ್ ಕೊಡುಗೆ
Update: 2020-09-06 18:04 IST
ಉಡುಪಿ : ಕರ್ಣಾಟಕ ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಿರುವ 19 ಲಕ್ಷ ರೂ. ಮೊತ್ತದ ಬೇಸಿಕ್ ಲೈಫ್ ಸಪೋರ್ಟ್ ಹೊಂದಿರುವ ಅಂಬ್ಯುಲೆನ್‌ನ್ನು ಹೊಸದಾಗಿ ನಿರ್ಮಿಸಲಾದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೆ.5ರಂದು ಹಸ್ತಾಂತರಿಸಲಾಯಿತು.
ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ಅವರಿಗೆ ಅಂಬ್ಯುಲೆನ್ಸ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮೊದಲಾದವರು ಉಪಸ್ಥಿತರಿದ್ದರು.