×
Ad

ಉಚಿತ ಬಿಲ್ವಪತ್ರೆ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

Update: 2020-09-06 18:14 IST

ಉಡುಪಿ, ಸೆ.6: ಪೇಜಾವರ ಮಠ ಹಾಗೂ ಉಡುಪಿ ಸಾಮಾಜಿಕ ಅರಣ್ಯ ವಿಭಾಗಗಳ ಜಂಟಿ ಆಶ್ರಯದಲ್ಲಿ ಎಸ್‌ಎಂಎಸ್‌ಪಿ ಸಂಸ್ಕೃತ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಶ್ರೀಕೃಷ್ಣ ಜಯಂತಿ ಪ್ರಯುಕ್ತ ಉಚಿತ ಬಿಲ್ವಪತ್ರೆ ಸಸಿ ವಿತರಣಾ ಕಾರ್ಯಕ್ರಮಕ್ಕೆ ರವಿವಾರ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಉಡುಪಿ ನಾಗರಿಕರು, ಭಕ್ತರು ಆರಾಧನೆಗೂ, ಆರೋಗ್ಯಕ್ಕೂ ಶ್ರೇಷ್ಠವಾಗಿರುವ ಬಿಲ್ವವನ್ನು ಮನೆಮನೆಗಳಲ್ಲಿ ನೆಟ್ಟು ಪೊಷಿಸಬೇಕು ಎಂದು ಕರೆನೀಡಿದರು.

ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ರವೀಂದ್ರ ಆಚಾರ್ಯ, ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ದೇವಾನಂದ ಉಪಾಧ್ಯಾಯ, ಪ್ರಾಚಾರ್ಯ ಡಾ.ಎನ್.ಎಲ್.ಭಟ್, ಮಠದ ದಿವಾನ ಎಂ. ರಘುರಾಮಾಚಾರ್ಯ, ಉದ್ಯಮಿ ಯಶ್‌ಪಾಲ್ ಸುವರ್ಣ, ದೇವರಾಜ್ ಪಾಣ ಮೊದಲಾದವರು ಉಪಸ್ಥಿತರಿದ್ದರು.

ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ಸಂಯೋಜಿಸಿದರು. ಸೆ.8ರ ವರೆಗೆ ಪ್ರತಿದಿನ ಬೆಳಗ್ಗೆ 10ಗಂಟೆಯಿಂದ ಸಂಜೆ 6ರವರೆಗೆ ಸಸಿಯನ್ನು ಭಕ್ತರು ಹಾಗೂ ಸಾರ್ವಜನಿಕರಿಗೆ ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News