×
Ad

ಬೆಂಗಳೂರು: ನಗರದಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ

Update: 2020-09-06 19:08 IST

ಬೆಂಗಳೂರು, ಸೆ. 6: ನಗರದ ಕೇಂದ್ರ ಭಾಗದಲ್ಲಿ ವಾಹನ ದಟ್ಟಣೆ ತಡೆಗಟ್ಟುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯ ಕೇಂದ್ರ ಭಾಗಗಳಲ್ಲಿ `ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ' ಜಾರಿಗೆ ತರಲಾಗುತ್ತಿದೆ.

ನಗರದಲ್ಲಿ ಕೇಂದ್ರ ಭಾಗದ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಈ ಸಂಬಂಧ ಪಾಲಿಕೆಯು ಆಯ್ದ 85 ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿ ತರಲಾಗುತ್ತಿದೆ.

ಕಸ್ತೂರ ಬಾ ರಸ್ತೆಯಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡಲಾಗಿದ್ದು, ಇನ್ನೂ ಏಳುಕಡೆಗಳಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಇನ್ನುಳಿದ ರಸ್ತೆಗಳಲ್ಲಿ ಹಂತ-ಹಂತವಾಗಿ ಸ್ಮಾರ್ಟ್ ಪಾಕಿರ್ಂಗ್ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ ಕಸ್ತೂರ ಬಾ ರಸ್ತೆಯಲ್ಲಿ ಸ್ಮಾರ್ಟ್ ಪಾಕಿರ್ಂಗ್‍ಗೆ ಚಾಲನೆ ನೀಡಲಾಗಿದ್ದು, ಸುಮಾರು 700 ಮೀಟರ್ ಉದ್ದದ ರಸ್ತೆಯ ಒಂದು ಭಾಗದಲ್ಲಿ ದ್ವಿಚಕ್ರ ವಾಹನ ಹಾಗೂ ಮತ್ತೊಂದು ಭಾಗದಲ್ಲಿ ಕಾರು ಪಾಕಿರ್ಂಗ್ ಮಾಡಲು ವ್ಯವಸ್ಥೆ ನೀಡಲಾಗಿದೆ.

ಡಿಜಿಟಲ್ ಶುಲ್ಕ ಪಾವತಿಸುವ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ವಾಹನಗಳ ಸುರಕ್ಷತೆಗಾಗಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಾಹನಗಳನ್ನು ನಿಲ್ಲಿಸುವ ಸ್ಥಳದಲ್ಲಿ ಸೆನ್ಸಾರ್ ಅಳವಡಿಸಲಾಗಿದ್ದು, ಎಷ್ಟು ವಾಹನಗಳು ನಿಂತಿವೆ, ಇನ್ನೂ ಎಷ್ಟು ವಾಹನಗಳ ನಿಲುಗಡೆಗೆ ಅವಕಾಶವಿದೆ ಎಂಬ ಮಾಹಿತಿ ತಿಳಿಯಲು ಡಿಜಿಟಲ್ ನಾಮಫಲಕ ಅಳವಡಿಸಲಾಗಿದೆ.

ವಾಹನಗಳನ್ನು ಪಾರ್ಕಿಂಗ್ ಮಾಡಲು ದರ ನಿಗದಿಪಡಿಸಿದ್ದು, ಪಾರ್ಕಿಂಗ್ ಶುಲ್ಕ ಹಾಗೂ ರಸೀದಿ ಪಡೆಯಲು ಸ್ವಯಂಚಾಲಿತ ಯಂತ್ರಗಳನ್ನು ಅಳವಡಿಸಲಾಗಿದೆ. ಸವಾರರು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ನಲ್ಲಿ ಹಣ ಪಾವತಿಸಬಹುದಾಗಿದೆ. ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯಿಂದ ವಾರ್ಷಿಕ 31.60 ಕೋಟಿ ರೂ. ಪಾಲಿಕೆಗೆ ಆದಾಯ ಬರಲಿದೆ.

ಸ್ಮಾರ್ಟ್ ಪಾರ್ಕಿಂಗ್ ಜಾರಿಯಾಗುವ ರಸ್ತೆಗಳು: ವಿಟ್ಟಲ್ ಮಲ್ಯಾ ರಸ್ತೆ, ವಿಟ್ಟಲ್ ಮಲ್ಯಾ ಆಸ್ಪತ್ರೆ ರಸ್ತೆ, ಎಂ.ಜಿ.ರಸ್ತೆ, ಸೈಂಟ್ ಮಾಕ್ರ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಚರ್ಚ್ ಸ್ಟ್ರೀಟ್ ರಸ್ತೆಗಳಲ್ಲಿ ಈ ಸ್ಮಾರ್ಟ್ ಪಾರ್ಕಿಂಗ್ ಜಾರಿಗೆ ತರಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News