ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಸ್ನಾತಕ-ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶಾತಿ ಆರಂಭ
ಬೆಂಗಳೂರು, ಸೆ. 6: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2020-21ನೆ (ಜುಲೈ ಅವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಾದ ಬಿಎ, ಬಿಕಾಂ, ಎಂಎ, ಎಂಸಿಜೆ, ಎಂಕಾಂ, ಬಿಎಲ್‍ಐಎಸ್ಸಿ., ಎಂಎಲ್‍ಐಎಸ್ಸಿ., ಎಂಎಸ್ಸಿ. ಎಂಬಿಎ, ಪಿಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಕರಾಮುವಿಯು ಮಲ್ಲೇಶ್ವರಂನ ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ಎಲ್ಲರಿಗೂ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್‍ನಲ್ಲಿ ಈ ಮೇಲ್ಕಂಡ ಪದವಿಗಳಿಗೆ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಡೌನ್‍ಲೋಡ್ ಮಾಡಿಕೊಂಡ ಪ್ರಾದೇಶಿಕ ಕೇಂದ್ರಗಳಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಲು ತಿಳಿಸಲಾಗಿದೆ.
ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್‍ಗಳ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಅ.10, 100ರೂ ದಂಡ ಶುಲ್ಕದೊಂದಿಗೆ ಅ.20 ಹಾಗೂ 200ರೂ. ದಂಡ ಶುಲ್ಕದೊಂದಿಗೆ ಅ.29 ಕಡೆಯ ದಿನಾಂಕವಾಗಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಶೇಷ ಸೂಚನೆ: ಬಿಪಿಎಲ್ ಕಾರ್ಡ್‍ನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.25ರಷ್ಟು ವಿನಾಯಿತಿ ನೀಡಲಾಗುವುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಸರಕಾರಿ ರಜೆ ದಿನಗಳಂದು ಮತ್ತು ರವಿವಾರಗಳಂದು ಕಚೇರಿ ತೆರೆಯುವ ಮೂಲಕ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-3. ದೂ. 080-2344 8811, 98445-06629, 96203-95584, 77608-48564ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.