ಹೊಸ ಕೊರೋನ ಸೋಂಕಿನ ಪ್ರಕರಣಗಳಲ್ಲಿ ಭಾರತ ಸಾರ್ವಕಾಲಿಕ ದಾಖಲೆ

Update: 2020-09-06 14:45 GMT

ಹೊಸದಿಲ್ಲಿ, ಸೆ. 6: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸಾರ್ವಕಾಲಿಕ ದಾಖಲೆಯ 90,632 ಕೊರೋನ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ 41 ಲಕ್ಷ ದಾಟಿದೆ.

ಭಾರತದಲ್ಲಿ ಒಟ್ಟು 41,13,811 ಕೊರೋನ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಬ್ರೆಝಿಲ್‌ನಲ್ಲೇ 41,23,000 ಕೊರೋನ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅಂದರೆ ಭಾರತ ಬ್ರೆಝಿಲ್‌ಗಿಂತ ಕೇವಲ 9,000 ಪ್ರಕರಣಗಳಷ್ಟು ಮಾತ್ರ ಹಿಂದೆ ಇದೆ.

ಕೊರೋನ ಸೋಂಕಿನಿಂದ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,065 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 70,626ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ 32 ಲಕ್ಷ ಜನರು ಕೊರೋನ ಸೋಂಕಿತರು ಗುಣಮುಖರಾಗಿದ್ದಾರೆ.

ಇದರೊಂದಿಗೆ ಕೊರೋನ ಸೋಂಕಿನಿಂದ ಗುಣಮಖರಾದವರ ಸಂಖ್ಯೆ ಶೇ. 77.32ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಹಾಗೂ ಉತ್ತರಪ್ರದೇಶಗಳಲ್ಲಿ ಅತ್ಯಧಿಕ ಕೊರೋನ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಐದು ರಾಜ್ಯಗಳಲ್ಲಿ ಶೇ. 62ರಷ್ಟು ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಸ್ತುತ ಜಗತ್ತಿನಲ್ಲಿ ಭಾರತದಲ್ಲೇ ಅತ್ಯಧಿಕ ಕೊರೋನ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ. ಆದರೆ, ಅತ್ಯಧಿಕ ಸಂಖ್ಯೆಯ ಚೇತರಿಕೆ ಪ್ರಮಾಣ ಸಮಾಧಾನಪಟ್ಟುಕೊಳ್ಳುವ ವಿಚಾರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News