'ಕೋವಿಡ್ ರೋಗಿಗಳಿಗೆ ಐಸಿಯು ಬೆಡ್ ಕೊರತೆ' : ಸೆ.7ರಂದು ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ
Update: 2020-09-06 20:16 IST
ಮಂಗಳೂರು, ಸೆ. 6: ದ.ಕ. ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ವೆಂಟಿಲೇಟರ್, ಐಸಿಯು ಬೆಡ್‌ಗಳ ಕೊರತೆಯಿದ್ದು, ಸೂಕ್ತ ಸೌಲಭ್ಯ ಒದಗಿಸುವಲ್ಲಿ ವಿಫಲವಾದ ರಾಜ್ಯ ಸರಕಾರದ ವಿರುದ್ಧ ಹಾಗೂ ರಾಜ್ಯ ಆರೋಗ್ಯ ಸಚಿವರು ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಸೆ.7ರಂದು ಬೆಳಗ್ಗೆ 11ಕ್ಕೆ ನಗರದ ವೆನ್ಲಾಕ್ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ ನಡೆಯಲಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.