ಸೆ.10ರವರೆಗೆ ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ
Update: 2020-09-06 20:36 IST
ಮಂಗಳೂರು, ಸೆ.6: ಆಗ್ನೇಯ ಮತ್ತು ಪೂರ್ವ ಕೇಂದ್ರ ಭಾಗದ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡುಬಂದಿದ್ದು, ರಾಜ್ಯದ ಕರಾವಳಿಯಲ್ಲಿ ಸೆ.10ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸೆ.7ರಿಂದ 10ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಚಂಡಮಾರುತವು ಉತ್ತರ ಭಾಗಕ್ಕೆ ಚಲಿಸಿ ಬಳಿಕ ತನ್ನ ವೇಗವನ್ನು ತಗ್ಗಿಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.