ಮಂಡ್ಯ: ಮಗನಿಗೆ ಕೊರೋನ ಸೋಂಕು; ತಾಯಿ ಆತ್ಮಹತ್ಯೆ

Update: 2020-09-06 15:16 GMT
ಸಾಂದರ್ಭಿಕ ಚಿತ್ರ

ಮಂಡ್ಯ, ಸೆ.6: ಮಗನಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ ಎಂದು ಮನನೊಂದು ಆತನ ತಾಯಿ ಹಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನಳ್ಳಿ  ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ (60) ಆತ್ಮಹತ್ಯೆ ಮಾಡಿಕೊಂಡಡವರು.

ನಿಂಗಮ್ಮ ಅವರ ಮಗನಿಗೆ ಸೋಂಕು ತಗುಲಿದೆ ಎಂದು ಅಧಿಕಾರಿಗಳು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇದರಿಂದಾಗಿ ಆತಂಕಕ್ಕೆ ಒಳಗಾದ ನಿಂಗಮ್ಮ ಮನನೊಂದು ಹಳ್ಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 

ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News