ಡ್ರಗ್ಸ್ ದಂಧೆ ಆರೋಪ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ನಟಿ ರಾಗಿಣಿ ದ್ವಿವೇದಿ
Update: 2020-09-06 20:50 IST
ಬೆಂಗಳೂರು, ಸೆ. 6: ಡ್ರಗ್ಸ್ ದಂಧೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ.
ನಗರದ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಜಾಮೀನಿಗಾಗಿ ರಾಗಿಣಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರವಷ್ಟೇ ರಾಗಿಣಿ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸಿಸಿಬಿ ಪೊಲೀಸರು ಅವರನ್ನು ಬಂಧಿಸಿದ್ದರಿಂದ ಆ ಅರ್ಜಿ ನಿಷ್ಫಲವಾಗಿತ್ತು.
ಹೀಗಾಗಿ, ಶನಿವಾರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಮೂರು ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.