ಕಾಂಗ್ರೆಸ್ ರಾಜ್ಯಸಭೆ ಸಂಸದ ಹೂಡಾಗೆ ಕೊರೋನ ಸೋಂಕು
Update: 2020-09-06 21:22 IST
ಚಂಡೀಗಢ, ಸೆ.6: ಹರ್ಯಾಣದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹೂಡಾಗೆ ಕೊರೋನ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ.
ಕೊರೋನ ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದ್ದು ವೈದ್ಯರ ಸಲಹೆಯಂತೆ ಇತರ ಪರೀಕ್ಷೆಗಳನ್ನು ನಡೆಸಲಾಗಿದೆ. ತನ್ನೊಂದಿಗೆ ನಿಕಟ ಸಂಪರ್ಕದಲ್ಲಿದ್ದವರೂ ಕ್ವಾರಂಟೈನ್‌ಗೆ ಒಳಪಡಬೇಕು ಎಂದು ದೀಪೇಂದರ್ ಹೂಡಾ ಟ್ವೀಟ್ ಮಾಡಿದ್ದಾರೆ.
ಶೀಘ್ರದಲ್ಲೇ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಹೂಡಾ ಸೋನಿಪತ್ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕಾರ್ಯ ನಡೆಸಿದ್ದರು. ಇದೀಗ ಈ ಸಭೆಯಲ್ಲಿ ಹೂಡಾರೊಂದಿಗೆ ವೇದಿಕೆ ಹಂಚಿಕೊಂಡಿದ್ದವರು ಮತ್ತು ನಿಕಟ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.