×
Ad

ರಾಜಧಾನಿಯಲ್ಲಿ 2,824 ಮಂದಿಗೆ ಕೊರೋನ ದೃಢ: 4,540 ಮಂದಿ ಗುಣಮುಖ, 38 ಮಂದಿ ಮೃತ್ಯು

Update: 2020-09-06 21:38 IST

ಬೆಂಗಳೂರು, ಸೆ.6: ನಗರದಲ್ಲಿ ರವಿವಾರದಂದು 2,824 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 4540 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 38 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,47,581 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ 2,163 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,05,692 ಜನರು ಇಲ್ಲಿಯವರೆಗೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 39,725 ಕೊರೋನ ಸೋಂಕಿತರು ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 1,95,633 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಶನಿವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 14,419 ಕಂಟೈನ್ಮೆಂಟ್ ಜೋನ್‍ಗಳಿವೆ. ಇದುವರೆಗೂ 17,181 ಕಂಟೈನ್ಮೆಂಟ್ ಜೋನ್‍ಗಳನ್ನು ಗುರುತಿಸಲಾಗಿದೆ. ನಗರದ 3,88,353 ಜನರನ್ನು ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತರನ್ನು 4,90,253 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 10,09,349 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.34ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.47ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.69.88ರಷ್ಟಿದೆ.

ಮನೆಯಲೇ ಕೊರೋನ ಪರೀಕ್ಷೆ: ಪಾಲಿಕೆಯ ಬೊಮ್ಮನಹಳ್ಳಿ ವಲಯದ 16 ವಾರ್ಡ್‍ಗಳಲ್ಲಿ ಕೊರೋನ ಪರೀಕ್ಷೆಯನ್ನು
ಮನೆಯಲ್ಲೇ ನಡೆಸಲಾಗುತ್ತಿದೆ. ಒಟ್ಟು 16 ವಾರ್ಡ್‍ಗಳ ವ್ಯಾಪ್ತಿಯಲ್ಲಿ 2 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ದಿನದ 24 ಗಂಟೆಯೂ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಅಜೀಂ ಪ್ರೇಂಜಿ ಫೌಂಡೇಷನ್ ಕೊರೋನ ಪರೀಕ್ಷೆಗೆ ಅಗತ್ಯವಿರುವ ಉಪಕರಣವನ್ನು ಕೊಡುಗೆಯಾಗಿ ನೀಡಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ಬೆಳೆಗ್ಗೆ 9 ರಿಂದ 3, 3 ರಿಂದ 9 ಮತ್ತು ರಾತ್ರಿ 9 ರಿಂದ ಬೆಳಗ್ಗೆ 9 ಹೀಗೆ ಮೂರು ಶಿಫ್ಟ್‍ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ತುರ್ತು ಅಗತ್ಯವಿದ್ದರೆ ಕೇವಲ 5 ಗಂಟೆಗಳಲ್ಲಿ ಕೋವಿಡ್ ಪರೀಕ್ಷೆ ವರದಿಯನ್ನು ನೀಡಲಾಗುತ್ತದೆ. ಕೋವಿಡ್ ಪರೀಕ್ಷೆ ಅಗತ್ಯ ಇರುವವರು 8884666670 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News