ಬೆಂಗಳೂರು: 13 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸಹಿತ ಇಬ್ಬರ ಬಂಧನ

Update: 2020-09-07 05:57 GMT

ಬೆಂಗಳೂರು, ಸೆ.7: ಡ್ರಗ್ಸ್ ಮಾರಾಟ ದಂಧೆಯಲ್ಲಿ ನಿರತ ಆರೋಪದಲ್ಲಿ ನೈಜೀರಿಯನ್ ಪ್ರಜೆಯೊಬ್ಬನ ಸಹಿತ ಇಬ್ಬರನ್ನು ಹನುಮಂತನಗರ ಪೊಲೀಸರು ರವಿವಾರ ಬೆಳಗ್ಗೆ ಬಂಧಿಸಿದ್ದಾರೆ.

ನಗರದ ಹೆಣ್ಣೂರಿನಲ್ಲಿ ವಾಸವಿದ್ದ ನೈಜೀರಿಯಾ ನಿವಾಸಿ ಜಾನ್ ಓಗೊಲೋಗೊ(35) ಹಾಗೂ ಹಲಸೂರು ನಿವಾಸಿ ಸ್ಯಾಮ್‌ಸನ್(24) ಬಂಧಿತ ಆರೋಪಿಗಳು. ಬಂಧಿತರಿಂದ ಎರಡೂವರೆ ಕೆಜಿ ಗಾಂಜಾ, 20 ಗ್ರಾಂ ಎಂಡಿಎಂಎ ಡ್ರಗ್ಸ್, 5.15 ಗ್ರಾಂ 10 ECSTASY ಪಿಲ್ಸ್, ಸುಮಾರು 530 ಗ್ರಾಂ HASHISH ಆಯಿಲ್ ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 13,05,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಹನುಮಂತನಗರ ಠಾಣಾ ವ್ಯಾಪ್ತಿಯ ಅಶೋಕ ನಗರದ ಬಿಎಂಎಸ್ ಇಂಜಿನಿಯರಿಂಗ್ ಹಾಸ್ಟೆಲ್ ಬಳಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News