×
Ad

ಆದಿಉಡುಪಿ: ಸಿಎಫ್‌ಐಯಿಂದ ರಕ್ತದಾನ ಶಿಬಿರ

Update: 2020-09-07 19:27 IST

ಉಡುಪಿ, ಸೆ.7: ಕೋವಿಡ್-19ನಿಂದಾಗಿ ಜಿಲ್ಲೆಯ ರಕ್ತನಿಧಿಗಳಲ್ಲಿ ರಕ್ತದ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ರವಿವಾರ ಆದಿಉಡುಪಿ ಮಸ್ಜಿದ್ -ಎ-ನೂರುಲ್ ಇಸ್ಲಾಂನಲ್ಲಿ ಆಯೋಜಿಸಲಾಗಿತ್ತು.

ಅಧ್ಯಕ್ಷತೆ ಸಿಎಫ್‌ಐ ಉಡುಪಿ ಜಿಲ್ಲಾಧ್ಯಕ್ಷ ನವಾಜ್ ಶೇಖ್ ವಹಿಸಿದ್ದರು. ಮಸೀದಿಯ ಇಮಾಮ್ ಮುಫ್ತಿ ಸುಹೇಲ್ ಕುರಾನ್ ಬೆಳಕಿನಲ್ಲಿ ರಕ್ತದಾನಕ್ಕೆ ಸಂಬಂಧಿಸಿದ ಕೆಲವು ುಹತ್ವದ ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಯಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಮೊಗವೀರ ಮಹಾ ಜನ ಸಂಘದ ಅಧ್ಯಕ್ಷ ಜಯ ಸಿ.ಕೊಟಿಯನ್ ಮಾತನಾಡಿದರು. ಮಣಿಪಾಲ ಕೆಎಂಸಿಯ ಹೆಮಟಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ದೀಪಿಕಾ ರಕ್ತದಾನ ಪ್ರಾಮುಖ್ಯತೆಯನ್ನು ವಿವರಿಸಿದರು.
ಮಸೀದಿ ಕಾರ್ಯದರ್ಶಿ ಅಬ್ದುಲ್ ಗಫೂರ್, ಪಿಎಫ್‌ಐ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಉದ್ಯಮಿ ಪೀರು ಸಾಹೇಬ್ ಉಪಸ್ಥಿತರಿದ್ದರು. ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಬಾಸಿತ್ ವಂದಿಸಿದರು. ಶಿಬಿರದಲ್ಲಿ ಸುಮಾರು 74 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News