ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು
Update: 2020-09-07 21:19 IST
ಕುಂದಾಪುರ, ಸೆ.7: ಕೋಟೇಶ್ವರ ಬೀಜಾಡಿ ಗ್ರಾಮದ ಚೀಪಾನ್‌ಬೆಟ್ಟು ರಸ್ತೆಯಲ್ಲಿರುವ ಮನೆಯೊಂದಕ್ಕೆ ಸೆ.7ರಂದು ನಸುಕಿನ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ವೌಲ್ಯ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿ ಯಾಗಿದೆ.
ಜಯರಾಜ ಶೆಟ್ಟಿ ಎಂಬವರ ಮನೆಯ ಮುಖ್ಯದ್ವಾರದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು, ಸುಮಾರು 162 ಗ್ರಾಂ ತೂಕದ ಚಿನ್ನಾಭರಣಗಳು, ಸುಮಾರು 130 ಗ್ರಾಂ ಬೆಳ್ಳಿಯ ಸೊತ್ತ್ತುಗಳು, ಸಿಸಿಟಿವಿ ಮೋಡೆಮ್, ಕಂಪ್ಯೂಟರ್ ಹಾಗೂ 40,000 ರೂ. ನಗದು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ ಸುಮಾರು 9,88,500ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.