ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ರಾಜಕೀಯ ಒತ್ತಡ ಇಲ್ಲ: ಕಮಲ್ ಪಂತ್

Update: 2020-09-07 16:21 GMT

ಬೆಂಗಳೂರು, ಸೆ.7: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದು ನಗರ ಪೊಲೀಸರು ಆಯುಕ್ತ ಕಮಲ್ ಪಂತ್ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಸಿಸಿಬಿ poಲೀಸರು ನಟಿ ರಾಗಿಣಿ ಹಾಗೂ ಇತರೆ ಆರೋಪಿಗಳ ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ. ಈ ಪ್ರಕರಣದ ಎಲ್ಲ ರೀತಿಯ ತನಿಖೆ ಸರಿಯಾಗಿ ನಡೆಯುತ್ತಿದೆ. ಹಾಗೆ ಸಾಕ್ಷ್ಯ ಪಡೆದು ಆರೋಪಿಗಳನ್ನ ಬಂಧಿಸುವುದಾಗಿ ತಿಳಿಸಿದರು.

ಈ ಪ್ರಕರಣದಲ್ಲಿ ನೇರವಾಗಿ ಬಂಧಿಸಲು ಸಾಧ್ಯವಿಲ್ಲ. ಸೂಕ್ತ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣ ಇನ್ನೂ ತುಂಬಾ ಮುಂದೆ ಹೋಗುವುದು ಇದೆ ಅವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News