ಅಧಿಕಾರಿಗಳ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆ: ಮಹಿಳೆ ವಿರುದ್ಧ ಪ್ರಕರಣ ದಾಖಲು
Update: 2020-09-07 21:52 IST
ಬೆಂಗಳೂರು, ಸೆ.7: ಬ್ಯಾಂಕ್ ಅಧಿಕಾರಿಗಳ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗೀತಾ ಗೋಪಾಲ್ ಎಂಬಾಕೆ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯ ದೂರು ನೀಡಿದ್ದು, ಇದರ ಅನ್ವಯ ಪ್ರಕರಣ ಪೊಲೀಸರು ದಾಖಲಿದ್ದಾರೆ.
ಮಹಿಳಾ ಹಕ್ಕು, ಕಾನೂನಿನ ದುರ್ಬಳಕೆ ಮಾಡಿಕೊಂಡಿರುವ ಮಹಿಳೆ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಪ್ರಿಯಾ ಆರ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.