ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ

Update: 2020-09-07 16:24 GMT

ಬೆಳಗಾವಿ, ಸೆ.7: ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರು-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೊದನೆ ದೊರೆತಿದ್ದು, ಈ ಯೋಜನೆಗೆ 927.40 ಕೋಟಿ ವೆಚ್ಚವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.   

ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಪ್ರಮುಖ ನಗರಗಳಾದ ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿಗೆ ಕಡಿಮೆ ಸಮಯದಲ್ಲಿ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಮುಂದಿನ ವರ್ಷಗಳಲ್ಲಿ ಅಭಿವೃದ್ಧಿಗೊಳ್ಳಲಿರುವ ಬೆಳಗಾವಿ-ಕಿತ್ತೂರು-ಧಾರವಾಡ ಕೈಗಾರಿಕಾ ಕಾರಿಡಾರ್ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಮೊದಲು ರೈಲು ಮಾರ್ಗ ಯೋಜನೆಗೆ ಅನುಮೋದನೆ ದೊರೆತಿರಲಿಲ್ಲ. ಹೀಗಾಗಿ, ಹೊಸದಾಗಿ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಕೇವಲ 2 ವರ್ಷಗಳ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿರುವುದು ದಾಖಲೆಯಾಗಿದೆ. ಈ ಹೊಸ ಮಾರ್ಗಕ್ಕೆ ಉಚಿತವಾಗಿ ಭೂಮಿ ಮತ್ತು ಶೇ.50ರಷ್ಟು ನಿರ್ಮಾಣ ವೆಚ್ಚ ನೀಡಲು ಬದ್ಧವಾಗಿರುವುದಾಗಿ ರಾಜ್ಯ ಸರಕಾರ ತಿಳಿಸಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News