ಖಾಸಗಿ ಬಸ್ ಕಂಬಕ್ಕೆ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Update: 2020-09-07 17:10 GMT

ಬೆಂಗಳೂರು, ಸೆ.7: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಪೀಣ್ಯ 8ನೆ ಮೈಲಿ ಜಂಕ್ಷನ್‍ನಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಬಸ್ ನಿಲ್ದಾಣದ ಕಂಬಕ್ಕೆ ಸಿಲುಕಿಕೊಂಡಿದೆ. ಅಲ್ಲೇ ನಿಂತಿದ್ದ ಪ್ರಯಾಣಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ತುರ್ತು ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬಸ್‍ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಅಪಘಾತ ಬಳಿಕ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News