ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ
Update: 2020-09-07 23:15 IST
ಬೆಂಗಳೂರು, ಸೆ.7: ಪ್ರಸಕ್ತ ಸಾಲಿನ ಸಿಇಟಿ, ನೀಟ್ ಪರೀಕ್ಷೆಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಗೆ ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ kmdc.kar.nic.in/arivu2 ಜಾಲತಾಣದಲ್ಲಿ ಅರ್ಜಿ ಸಲ್ಲಿಸಿ, ಅದರ ಪ್ರತಿಯನ್ನು ಸೆ. 18ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಬೆಂಗಳೂರು ನಗರ ಜಿಲ್ಲೆ (ದಕ್ಷಿಣ ವಿಭಾಗ) ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕಬ್ಬನ್ ಪೇಟೆ ಮುಖ್ಯ ರಸ್ತೆಯ ಹಲಸೂರು ಗೇಟ್ ಪೆÇಲೀಸ್ ಸ್ಟೇಷನ್ ಹಿಂಭಾಗದಲ್ಲಿರುವ ಹಮೀದ್ ಷಾ ಕಾಂಪ್ಲೆಕ್ಸ್‍ನ 2ನೇ ಮಹಡಿಯಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (080-22114817) ಸಂಪರ್ಕಿಸಬಹುದಾಗಿದೆ.