ಎಸ್ಟಿ ಸಮಾಜಕ್ಕೆ ಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಉಗ್ರ ಹೋರಾಟ: ಬಿ.ಎಸ್.ಜಂಬಯ್ಯ ಎಚ್ಚರಿಕೆ

Update: 2020-09-07 17:45 GMT

ಬಳ್ಳಾರಿ, ಸೆ.7: ವಾಲ್ಮೀಕಿ ಸಮಾಜದವರು ಐವತ್ತು ವರ್ಷಗಳಿಂದ ಮೀಸಲಾತಿ ಹೆಚ್ಚಿಸಲು ಹೋರಾಟ ನಡೆಸುತ್ತಿದ್ದರೂ ಸರಕಾರ ಈವರೆಗೂ ಸ್ಪಂದಿಸಿಲ್ಲ. ಬರುವ ವಿಧಾನಸಭೆಯ ಅಧಿವೇಶನದಲ್ಲಿ ಶೇ.7.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಬಿ.ಎಸ್.ಜಂಬಯ್ಯ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಹೊಸಪೇಟೆ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯಾವುದೇ ಹೋರಾಟ ನಡೆಸದೇ, ರಾಜಕೀಯ ಪಿತೂರಿಯಿಂದ ಮುಂದುವರಿದ ಜನಾಂಗದವರು ಶೇ.10ರಷ್ಟು ಮೀಸಲಾತಿ ಸೌಲಭ್ಯ ಪಡೆದುಕೊಂಡಿದ್ದಾರೆ. ವಾಲ್ಮೀಕಿ ಗುರುಪೀಠದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಸಿಎಂ ಬಿಎಸ್‍ವೈ ಅವರು ಎಸ್ಟಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಭರವಸೆ ಕೊಟ್ಟಿದ್ದರು. ಆದರೆ, ಭರವಸೆ ಇಲ್ಲಿಯವರೆಗೆ ಈಡೇರಿಲ್ಲ ಎಂದು ಹೇಳಿದರು.

ಸದ್ಯ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.3ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ. ಸರಕಾರ ರಚಿಸಿದ ನ್ಯಾ.ನಾಗಮೋಹನ್‍ದಾಸ್ ವರದಿಯಲ್ಲಿ ಶೇ.5ರಷ್ಟು ಮೀಸಲಾತಿಗೆ ಶಿಫಾರಸು ಮಾಡಲಾಗಿದೆ. ಅಲ್ಲದೆ, ಮೀಸಲಾತಿಯನ್ನು ಶೇ.7.5ರಷ್ಟು ಹೆಚ್ಚಿಸಿ ಎಂದು ಸರಕಾರಕ್ಕೆ ವರದಿ ಸಲ್ಲಿಸಿದ್ದರೂ ಸಿಎಂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News