ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಆರೋಪಿಗೆ 15 ವರ್ಷ ಕಠಿಣ ಶಿಕ್ಷೆ

Update: 2020-09-07 18:07 GMT

ತುಮಕೂರು,ಸೆ. 7: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪೋಕ್ಸೋ ಕಾಯ್ದೆ ಅಡಿ 15 ವರ್ಷ ಕಠಿಣ ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಮಹಮದ್ ಐಮಾನ್ ಶಿಕ್ಷೆಗೆ ಒಳಗಾದ ಆರೋಪಿ. ಈತನಿಗೆ ಪೋಕ್ಸೋ ಕಾಯ್ದೆ ಕಲಂ 6ರ ಅಪರಾಧಕ್ಕಾಗಿ 10 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ ದಂಡ ಹಾಗೂ ಐಪಿಸಿ ಕಲಂ 366ರ ಅಪರಾಧಕ್ಕಾಗಿ 5 ವರ್ಷ ಜೈಲು ಶಿಕ್ಷೆ ಹಾಗೂ 5 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

ತಿಲಕ್‍ ಪಾರ್ಕು ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಸರಕಾರದ ವಿಶೇಷ ಅಭಿಯೋಜಕಿ ಗಾಯತ್ರಿರಾಜು ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News