ಖಶೋಗಿ ಹತ್ಯೆ ಪ್ರಕರಣ: ಐವರ ಮರಣದಂಡನೆ ಶಿಕ್ಷೆ ರದ್ದು

Update: 2020-09-07 18:24 GMT

 ರಿಯಾದ್, ಸೆ.7: ಪತ್ರಕರ್ತ ಜಮಾಲ್ ಖಶೋಗಿ ಹತ್ಯೆ ಪ್ರಕರಣದಲ್ಲಿ ಸೌದಿಯ ನ್ಯಾಯಾಲಯ ನೀಡಿದ ಅಂತಿಮ ತೀರ್ಪಿನಲ್ಲಿ ಐದು ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿ ಜೈಲು ಶಿಕ್ಷೆಯನ್ನಾಗಿ ಪರಿವರ್ತಿಸಿದೆ ಎಂದು ಸೌದಿ ಅರೇಬಿಯಾದ ಸರಕಾರಿ ಮಾಧ್ಯಮ ವರದಿ ಮಾಡಿದೆ.

 ಐವರು ಆರೋಪಿಗಳಿಗೆ 20 ವರ್ಷದ ಜೈಲುಶಿಕ್ಷೆ ಮತ್ತು ಉಳಿದ ಮೂವರಿಗೆ 7ರಿಂದ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ. ತಂದೆಯನ್ನು ಹತ್ಯೆ ಮಾಡಿದವರನ್ನು ತಾವು ಕ್ಷಮಿಸಿರುವುದಾಗಿ ಕಳೆದ ಮೇ ತಿಂಗಳಿನಲ್ಲಿ ಖಶೋಗಿಯ ಪುತ್ರರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ ಎನ್ನಲಾಗಿದೆ.

ಖಶೋಗಿ ಹತ್ಯೆ ಪ್ರಕರಣದಲ್ಲಿ ಐವರು ಹೆಸರಿಸದ ವ್ಯಕ್ತಿಗಳಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ಬಗ್ಗೆ ಮಾನವ ಹಕ್ಕು ಹೋರಾಟ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News