×
Ad

ಉಡುಪಿ: ಕೋವಿಡ್‌ಗೆ ಜಿಲ್ಲೆಯ ದಿನದ ಗರಿಷ್ಠ 7 ಬಲಿ; 247 ಮಂದಿಯಲ್ಲಿ ಕೊರೋನ ಪಾಸಿಟಿವ್

Update: 2020-09-08 19:35 IST

ಉಡುಪಿ, ಸೆ. 8: ನೋವೆಲ್ ಕೊರೋನ ಸೋಂಕು ಜಿಲ್ಲೆಯ ದಿನದ ಗರಿಷ್ಠ ಏಳು ಬಲಿಯನ್ನು ಮಂಗಳವಾರ ಪಡೆದಿದೆ. ಈ ಮೂಲಕ ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 121ಕ್ಕೆ ನೆಗೆದಿದೆ. ಇಂದು ಮೃತಪಟ್ಟ ಏಳು ಮಂದಿಯಲ್ಲಿ ಆರು ಮಂದಿ ಉಡುಪಿಯವರು ಹಾಗೂ ಒಬ್ಬರು ಕುಂದಾಪುರ ತಾಲೂಕಿನವರು. ಐವರು ಪುರುಷರು ಹಾಗೂ ಇಬ್ಬರು ಮಹಿಳೆಯರಾಗಿದ್ದಾರೆ.

ಇದರೊಂದಿಗೆ ದಿನದಲ್ಲಿ 247 ಮಂದಿಯಲ್ಲಿ ಕೋವಿಡ್‌ಗೆ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರಾದವರ ಒಟ್ಟು ಸಂಖ್ಯೆ 13 ಸಾವಿರದ ಗಡಿ ದಾಟಿದ್ದು, 13087ಕ್ಕೇರಿದೆ. ಅಲ್ಲದೇ ದಿನದಲ್ಲಿ 1057 ಮಂದಿಯ ಗಂಟಲುದ್ರವದ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಮಂಗಳವಾರ ಕೋವಿಡ್ ಪಾಸಿಟಿವ್ ಪತ್ತೆಯಾದ 247 ಮಂದಿಯಲ್ಲಿ ಉಡುಪಿ ತಾಲೂಕಿನ 115 ಮಂದಿ, ಕುಂದಾಪುರ ತಾಲೂಕಿನ 83 ಹಾಗೂ ಕಾರ್ಕಳ ತಾಲೂಕಿನ 45 ಮಂದಿ ಇದ್ದು, ಹೊರಜಿಲ್ಲೆಯಿಂದ ಉಡುಪಿಗೆ ಚಿಕಿತ್ಸೆಗೆಂದು ಬಂದ ನಾಲ್ವರಲ್ಲಿ ಸಹ ಕೊರೋನ ಪಾಸಿಟಿವ್ ಪತ್ತೆಯಾಗಿದೆ ಎಂದವರು ತಿಳಿಸಿದರು.

ದಿನದಲ್ಲಿ ಮಕ್ಕಳು ಸೇರಿದಂತೆ 143 ಮಂದಿ ಪುರುಷರು ಹಾಗೂ 104 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 61 ಪುರುಷರು ಹಾಗೂ 56 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಡಾ.ಸೂಡ ಹೇಳಿದರು.

ಪಾಸಿಟಿವ್ ದೃಢಗೊಂಡ 247 ಮಂದಿಯಲ್ಲಿ 11 ಮಂದಿ ಶೀತಜ್ವರದಿಂದ ಹಾಗೂ ಆರು ಮಂದಿ ಉಸಿರಾಟದ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ದೇಶಿಯ ಪ್ರವಾಸದಿಂದ ಮರಳಿದ ನಾಲ್ಕು ಮಂದಿಯಲ್ಲಿ ಸಹ ಸೋಂಕು ಪತ್ತೆಯಾ ಗಿದೆ. ಕಳವಳಕರ ವಿಷಯವೆಂದರೆ ಗರಿಷ್ಠ 226 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.

178 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಇಂದು 178 ಮಂದಿ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದಬಿಡುಗಡೆಗೊಂಡಿದ್ದಾರೆ. ಇವರಲ್ಲಿ 77 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 101 ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದು ಗುಣಮುಖ ರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 11,124ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1884 ಮಂದಿ ಇನ್ನೂ ಚಿಕಿತ್ಸೆಯಲ್ಲಿದ್ದಾರೆ. ಇವರಲ್ಲಿ 876 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 968 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

1424  ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಮಂಗಳವಾರ ಒಟ್ಟು 1424 ಮಂದಿಯ ಗಂಟಲುದ್ರವದ ಸ್ಯಾಂಪಲ್‌ ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 1146 ಮಂದಿ, ಕೋವಿಡ್ ಸಂಪರ್ಕಿತರು 134 ಮಂದಿ ಇದ್ದರೆ, ಉಸಿರಾಟ ತೊಂದರೆಯ 11, ಶೀತಜ್ವರದಿಂದ ಬಳಲುವ 69 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 64 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪರೀಕ್ಷೆಗಾಗಿ ಪಡೆದ ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 79489 ಕ್ಕೇರಿದೆ. ಇವುಗಳಲ್ಲಿ ಈವರೆಗೆ 66,091 ನೆಗೆಟಿವ್, 13,087 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 121 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 311 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಏಳು ಮಂದಿ ಬಲಿ: ಜಿಲ್ಲೆಯಲ್ಲಿಂದು ಗರಿಷ್ಠ ಏಳು ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇವರಲ್ಲಿ ಕುಂದಾಪುರ ತಾಲೂಕಿನ 70ರ ಹರೆಯ ಮಹಿಳೆ, ಉಡುಪಿ ತಾಲೂಕಿನ 74ರ ಮಹಿಳೆ, 66, 66, 55, 42, 60 ವರ್ಷ ಪ್ರಾಯದ ಪುರುಷರು ಸೇರಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಇವರೆಲ್ಲರೂ ಅನ್ಯ ಕಾಯಿಲೆಗಳ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಈ ವೇಳೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಆದರೆ ಚಿಕಿತ್ಸೆ ಫಲಕಾರಿ ಯಾಗದೇ ಇವರೆಲ್ಲರೂ ಮೃತಪಟ್ಟಿದ್ದಾರೆ. ಕೆಲವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನವರಿಗೆ ಉಸಿರಾಟದ ತೊಂದರೆಯೊಂದಿಗೆ ಮಧುಮೇಹ, ಕಿಡ್ನಿ, ಹೃದಯ ಸಮಸ್ಯೆ, ನ್ಯುಮೋನಿಯಾ, ಶ್ವಾಸಕೋಶದ ತೊಂದರೆಗಳು ಇದ್ದವು ಎಂದು ಇಲಾಖಾ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News