×
Ad

ಕೌಶಲಾಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ

Update: 2020-09-08 20:04 IST

ಮಂಗಳೂರು, ಸೆ.8: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಮತ್ತು ಪರಿಶಿಷ್ಟ ಜಾತಿ, ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ 30 ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಫ್ಯಾಶನ್ ಮತ್ತು ಡ್ರೆಸ್ ಡಿಸೈನಿಂಗ್‌ನ ಉದ್ಘಾಟನಾ ಕಾರ್ಯಕ್ರಮವು ನಗರದ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಸೇವಾ ಕೇಂದ್ರದಲ್ಲಿ ಸೋಮವಾರ ನಡೆಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿದರು. ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ ಬಾಳೇರಿ ಅಧ್ಯಕ್ಷತೆ ವಹಿಸಿದ್ದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ ಹಾಗೂ ವಲಯಾಧಿಕಾರಿ ರಾಘವೇಂದ್ರ ಎಂ. ಅತಿಥಿಗಳಾಗಿ ಭಾಗವಹಿಸಿದ್ದರು. ಸಿಡಾಕ್‌ನ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಸ್ವಾಗತಿಸಿದರು. ಸಿಡಾಕ್ನ ಸಲಹೆಗಾರರಾದ ಪ್ರವಿಷ್ಯ ಮತ್ತು ವಿದ್ಯಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News