9-12ನೆ ತರಗತಿಗಳು ಆರಂಭ: ಶಾಲೆಗಳನ್ನು ತೆರೆಯಲು ಮಾರ್ಗಸೂಚಿಗಳನ್ನು ಪ್ರಕಟಿಸಿದ ಸರಕಾರ

Update: 2020-09-08 16:03 GMT

ಹೊಸದಿಲ್ಲಿ: ಸೆಪ್ಟಂಬರ್ 21ರಿಂದ 9ರಿಂದ 12ನೆ ತರಗತಿಯ ವಿದ್ಯಾರ್ಥಿಗಳಿಗಾಗಿ ಶಾಲೆಗಳನ್ನು ತೆರೆಯಲು ಕೇಂದ್ರ ಗೃಹಸಚಿವಾಲಯ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕೊರೋನ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾರ್ಚ್ ನಿಂದೀಚೆಗೆ ದೇಶಾದ್ಯಂತ ಶಾಲೆಗಳು ಮುಚ್ಚಿವೆ.

ವಿದ್ಯಾರ್ಥಿಗಳು ಸುರಕ್ಷಿತವಾಗಿ ತರಗತಿಗಳಿಗೆ ದಾಖಲಾಗಲು ಮತ್ತು ಅವರ ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಗೃಹ ಸಚಿವಾಲಯವು ಹಲವು ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪ್ರಕಟಿಸಿದೆ.

9 ಮತ್ತು 12ನೆ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸ್ವಯಂ ಪ್ರೇರಿತವಾಗಿ ಆನ್ ಲೈನ್ ಮೂಲಕ ಅಥವಾ ನೇರವಾಗಿ ತರಗತಿಗಳಿಗೆ ಹಾಜರಾಗುವ ಮೂಲಕ ಶಿಕ್ಷಣವನ್ನು ಮುಂದುವರಿಸುವ ಆಯ್ಕೆಗಳಿವೆ.

ಬಯೋಮೆಟ್ರಿಕ್ ರೀತಿಯ ಹಾಜರಾತಿಯ ಬದಲಾಗಿ ಪರ್ಯಾಯ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ತರಗತಿಗಳಲ್ಲಿ ವಿದ್ಯಾರ್ಥಿಗಳು 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಸಿಬ್ಬಂದಿಗಳ ಕೊಠಡಿ, ಕಚೇರಿಗಳಲ್ಲಿ, ಕ್ಯಾಂಟೀನ್, ಗ್ರಂಥಾಲಯಗಳಲ್ಲೂ ಸುರಕ್ಷಿತ ಅಂತರವಿರಬೇಕು. ಹೆಚ್ಚಿನ ವಿದ್ಯಾರ್ಥಿಗಳಿರುವ ಅಸೆಂಬ್ಲಿಗಳು, ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಆಗಾಗ ಕೈಗಳನ್ನು ತೊಳೆಯುವುದು ಕಡ್ಡಾಯವಾಗಿದೆ.

ಕಂಟೈನ್ ಮೆಂಟ್ ಝೋನ್ ನ ಹೊರಗಿನ ಶಾಲೆಗಳಿಗೆ ಮಾತ್ರ ತೆರೆಯಲು ಅವಕಾಶವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News