×
Ad

ಕುಮಾರಸ್ವಾಮಿ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿರುತ್ತಾರೆ: ಸಚಿವ ಬಿ.ಸಿ.ಪಾಟೀಲ್

Update: 2020-09-08 22:02 IST

ಮಂಡ್ಯ, ಸೆ.8: ಡ್ರಗ್ಸ್​ ಮಾಫಿಯಾ ಹಣದಿಂದಲೇ ಮೈತ್ರಿ ಸರಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಟೀಕಿಸಿದ್ದಾರೆ.

ಮದ್ದೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಆರೋಪಿಸುತ್ತಿರುವ ಕುಮಾರಸ್ವಾಮಿ ಒಂದು ವರ್ಷ ಸುಮ್ಮನಿದ್ದಿದ್ದು ಏಕೆ? ಡ್ರಗ್ಸ್ ವಿಚಾರ ಸುದ್ದಿಯಲ್ಲಿರುವ ಈ ಸಂದರ್ಭದಲ್ಲಿ ಅವರು ಆರೋಪಿಸುತ್ತಿರುವುದೇಕೆ? ಮೈತ್ರಿ ಸರಕಾರದ ನಶೆಯಿಂದ ಹೊರಬರಲು ಕುಮಾರಸ್ವಾಮಿ ಅವರಿಗೆ ಒಂದು ವರ್ಷ ಬೇಕಾಯಿತೇ? ಮೈತ್ರಿ ಸರಕಾರ ಅಸ್ಥಿರಗೊಂಡಾಗ ಏಕೆ ಹೇಳಲಿಲ್ಲ. ಅವರು ಆಗಾಗ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿರುತ್ತಾರೆ ಎಂದು ವ್ಯಂಗವಾಡಿದರು.     

ಡ್ರಗ್ಸ್ ದಂಧೆಯಲ್ಲಿ ಯಾರು ತೊಡಗಿದ್ದಾರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಿ. ರಾಜಕಾರಣಿಗಳು, ರಾಜಕಾರಣಿ ಮಕ್ಕಳು, ಸಿನಿಮಾ ನಟರಾಗಲಿ, ಯಾರಿಗೂ ಮುಲಾಜಿಲ್ಲಾ ಎಂದು ಅವರು ಪ್ರತಿಕ್ರಿಯಿಸದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News