×
Ad

ಎನ್‍ಎಲ್‍ಎಸ್‍ಐಯುನಲ್ಲಿ ಶೇ.25ರಷ್ಟು ಮೀಸಲಾತಿ: ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ

Update: 2020-09-08 22:18 IST

ಬೆಂಗಳೂರು, ಸೆ.8: ರಾಜ್ಯದ ವಿದ್ಯಾರ್ಥಿಗಳಿಗೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ(ಎನ್‍ಎಲ್‍ಎಸ್‍ಐಯು)ನಲ್ಲಿ ಶೇ.25ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ವಿಧಾನಸಭೆ ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.

ಈ ಕುರಿತು ಕಾನೂನು ವಿದ್ಯಾರ್ಥಿಗಳು ಮತ್ತು ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‍ನಲ್ಲಿ ನಡೆಯಿತು. ಎನ್‍ಎಲ್‍ಎಸ್‍ಐಯು (ತಿದ್ದುಪಡಿ) ಕಾಯ್ದೆ 2020ಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ವರ್ಷದ ಮಾರ್ಚ್ ನಲ್ಲಿ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ಕಾಲ ಅಧ್ಯಯನ ಮಾಡಿದವರಿಗೆ ಎನ್‍ಎಲ್‍ಎಸ್‍ಐಯುನಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ವಿಧಾನಸಭೆ ಎನ್‍ಎಲ್‍ಎಸ್‍ಐಯು (ತಿದ್ದುಪಡಿ) ಕಾಯ್ದೆ 2020 ಅನ್ನು ಅಂಗೀಕರಿಸಿತು. ಈ ಅಂಗೀಕಾರವನ್ನು ಪ್ರಶ್ನಿಸಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News