ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮೂರು ಲಾರಿ, ಜೆಸಿಬಿ ವಶ

Update: 2020-09-08 16:55 GMT

ಮಂಗಳೂರು, ಸೆ.8: ನಗರದ ಹೊರವಲಯದ ಸುರತ್ಕಲ್ ಮುಕ್ಕ ಎಂಬಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಅಧಿಕಾರಿಗಳು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಮಂಗಳವಾರ ಪಡೆದಿದ್ದಾರೆ.

ಎಸ್‌ಇಝೆಡ್ ವಲಯದಲ್ಲಿ ಅನಧಿಕೃತವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಅಧಿಕಾರಿಗಳು ಅಡ್ಡೆಗೆ ದಾಳಿ ನಡೆಸುತ್ತಿದ್ದಂತೆ ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸೊತ್ತನ್ನು ಮುಂದಿನ ಕ್ರಮಕ್ಕೆ ಸುರತ್ಕಲ್ ಠಾಣೆಗೆ ಹಸ್ತಾಂತರಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕ ನವೀನ್‌ಕುಮಾರ್, ತಹಶೀಲ್ದಾರ್ ಗುರುಪ್ರಸಾದ್, ಗ್ರಾಮ ಕರಣಿಕ, ಸುರತ್ಕಲ್ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ಅಕ್ರಮ ಮರಳು-ಮಾಹಿತಿ ನೀಡಿ: ಅಕ್ರಮ ಮರಳುಗಾರಿಕೆ ವಿರುದ್ಧ ಜಿಲ್ಲಾಡಳಿತ ಸಮರ ಸಾರಿದ್ದು, ಪ್ರತಿದಿನವೂ ಹಗಲು-ರಾತ್ರಿ ಒಂದೊಂದು ತಂಡವಾಗಿ ಕಾರ್ಯಾಚರಣೆ ನಡೆಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅದರಂತೆ, ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ ಅಥವಾ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡುವವರ ಹೆಸರನ್ನು ಬಹಿರಂಗಗೊಳಿಸಲಾಗುವುದಿಲ್ಲ ಎಂದು ತಹಶೀಲ್ದಾರ್ ಗುರುಪ್ರಸಾದ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News