ಬೆಂಗಳೂರು: ಕೊರೋನ ಸೋಂಕಿಗೆ 55 ಮಂದಿ ಮೃತ್ಯು; 3,102 ಮಂದಿಗೆ ಪಾಸಿಟಿವ್

Update: 2020-09-08 17:15 GMT

ಬೆಂಗಳೂರು, ಸೆ.6: ನಗರದಲ್ಲಿ ಮಂಗಳವಾರದಂದು 3,102 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2,330 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 55 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,53,625 ಮಂದಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ 2,266 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,10,972 ಜನರು ಇಲ್ಲಿಯವರೆಗೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 30,386 ಕೊರೋನ ಸೋಂಕಿತರು ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರಚಿಕಿತ್ಸಾಲಯದಲ್ಲಿ ಒಟ್ಟು 2,02,022 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಸೋಮವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 14,450 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 17,282 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ. ನಗರದ 4,07,123 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 5,11,570 ಜನರನ್ನು ಗುರುತಿಸಲಾಗಿದೆ.

ನಗರದಲ್ಲಿ 10,60,813 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.19ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.47ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.71.62ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News