ಬಂಟ್ವಾಳ: ಕೊಠಡಿಯಲ್ಲಿ 39 ಕೆ.ಜಿ. ಗಾಂಜಾ ದಾಸ್ತಾನು ; ಆರೋಪಿ ಸೆರೆ

Update: 2020-09-08 17:31 GMT

ಬಂಟ್ವಾಳ, ಸೆ.8: ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿರುವ ಖಚಿತ ಮಾಹಿತಿಯ ಮೇರೆಗೆ ಮನೆ ಮೇಲೆ ದಾಳಿ ನಡೆಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. 

ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಅಹಮ್ಮದ್ ಸಾಬಿತ್ (30) ಬಂಧಿತ ಆರೋಪಿಯಾಗಿದ್ದು ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 39 ಕೆ.ಜಿ. 948 ಗ್ರಾಂ ತೂಕದ 19,97,400 ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಆರೋಪಿ ಅಹಮ್ಮದ್ ಸಾಬಿತ್ ಮತ್ತು ಇನ್ನೋರ್ವ ಗಾಂಜಾವನ್ನು ಪರ್ಲಿಯಾದ ಬಾಡಿಗೆ ಕೊಠಡಿಯಲ್ಲಿ ದಾಸ್ತಾನು ಇರಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಎಸ್.ಪಿ. ಲಕ್ಮೀಪ್ರಸಾದ್ ಅವರ ನಿರ್ದೇಶನದಂತೆ ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತ್ರತ್ವದಲ್ಲಿ ಬಂಟ್ವಾಳ ಎಸ್. ಐ.ಅವಿನಾಶ್ ಅವರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News