ಬೆಂಗಳೂರು ವಿವಿ ಕುಲಪತಿ ಭರವಸೆ: ಬೆಂ.ವಿಶ್ವವಿದ್ಯಾಲಯ ನೌಕರರ ಮುಷ್ಕರ ವಾಪಸ್

Update: 2020-09-08 17:46 GMT

ಬೆಂಗಳೂರು, ಸೆ.8: ಬೆಂಗಳೂರು ವಿವಿ ಕುಲಪತಿ ಪ್ರೊ.ವೇಣುಗೋಪಾಲ್ ನೀಡಿರುವ ಭರವಸೆ ಮೇರೆಗೆ ನೌಕರರಿಗೆ ಆರೋಗ್ಯ ಕಾರ್ಡ್, ಕೆಲಸಕ್ಕೆ ಸೇರಿದ ದಿನಾಂಕದಿಂದಲೇ ವೇತನ ಶ್ರೇಣಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂವಿವಿ ಶಿಕ್ಷಕೇತರ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.

ಕಳೆದ ಆರು ದಿನಗಳಿಂದ ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕೇತರ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಷ್ಕರ ನಡೆಸುತ್ತಿದ್ದರು. ಈ ಹಿನ್ನಲೆಯಲ್ಲಿ ಕುಲಪತಿ ಪ್ರೊ.ವೇಣುಗೋಪಾಲ್, ಸಂಘಟನೆಯ ಮುಖ್ಯಸ್ಥರ ಜತೆ ಮಾತನಾಡಿದರು. ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಮುಷ್ಕರ ಹಿಂಪಡೆದಿದ್ದೇವೆಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಕೃಷ್ಣಪ್ಪ ತಿಳಿಸಿದ್ದಾರೆ.

ಬೇಡಿಕೆಗಳು:

-ಮಹಿಳಾ ನೌಕರರಿಗೆ ವಿಶ್ರಾಂತಿ ಕೊಠಡಿ.

-ಅನುಕಂಪದ ಆಧಾರದ ಮೇಲೆ ನೇಮಕಗೊಂಡಿರುವ ನೌಕರರನ್ನು ವಿದ್ಯಾರ್ಹತೆಯ ಆಧಾರದ ಮೇಲೆ ಹುದ್ದೆ ನೀಡುವುದು

-ಜ್ಯೇಷ್ಟತೆಯ ಆಧಾರದ ಮೇಲೆ ಬಡ್ತಿ ನೀಡುವುದು.

-ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News