ಕಾನೂನು ಪದವೀಧರರಿಗೆ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ

Update: 2020-09-08 18:12 GMT

ಬೆಂಗಳೂರು, ಸೆ, 8: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೆ ಸಾಲಿನ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಮ್, ಕ್ರೈಸ್ತ, ಜೈನ, ಸಿಖ್, ಬೌದ್ಧ ಮತ್ತು ಪಾರ್ಸಿ ಧರ್ಮದ ಕಾನೂನು ಪದವೀಧರರಿಗೆ ವಕೀಲ ವೃತ್ತಿಯ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಶಿಷ್ಯವೇತನಕ್ಕಾಗಿ ಆರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 5ಸಾವಿರ ರೂ.ಗಳ ತರಬೇತಿ ಭತ್ಯೆಯನ್ನು ನೀಡಲಾಗುವುದು. ಆರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಸೆ.30 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ. 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಬೆಂಗಳೂರು ಹಾಗೂ ದೂರವಾಣಿ ಸಂಖ್ಯೆ: 080-22866718 ನ್ನು ಸಂಪರ್ಕಿಸಬಹದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಡಿ.ಎಂ.ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News