ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

Update: 2020-09-09 10:57 GMT

ಬೆಂಗಳೂರು, ಸೆ.9: ಅಕ್ರಮ ಮಾದಕ ವಸ್ತುಗಳ ಸಾಗಾಟ ಆರೋಪದಡಿ 1 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳನ್ನು ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬೆಲ್ಜಿಯಂನಿಂದ ಮಸಾಜ್ ಮಾಡುವ ಯಂತ್ರಗಳಲ್ಲಿ ಮಾದಕ ವಸ್ತಗಳನ್ನು ಸಾಗಾಟ ಮಾಡಲಾಗುತಿತ್ತು ಎನ್ನುವ ಮಾಹಿತಿ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.

ಡ್ರಗ್ಸ್ ಜಾಲದ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಆಗಮಿಸುವ ಪ್ರತಿಯೊಂದು ವಸ್ತುಗಳನ್ನು ಸೂಕ್ಷ್ಮವಾಗಿ ತಪಾಸಣೆಗೊಳಪಡಿಸುತ್ತಿದ್ದಾರೆ. ಇಂದು ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾಗ ಮಸಾಜ್ ಯಂತ್ರದಲ್ಲಿಟ್ಟಿದ್ದ ಎಂಡಿಎಂಎಲ್ ಮಾತ್ರೆಗಳು, ಎಕ್ಸಾಟಿಯಾ ಸೇರಿದಂತೆ ಭಾರೀ ಪ್ರಮಾಣದ ಮಾದಕ ದ್ರವ್ಯ ಪತ್ತೆಯಾಗಿದ್ದು, ಮಿಂಚಿನ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News