ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ: ಪ್ರಶಾಂತ್ ಸಂಬರಗಿ ವಿರುದ್ಧ ಝಮೀರ್ ಅಹ್ಮದ್ ದೂರು

Update: 2020-09-09 14:44 GMT

ಬೆಂಗಳೂರು, ಸೆ.9: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಝಮೀರ್ ಅಹ್ಮದ್ ಖಾನ್ ದೂರು ನೀಡಿದ್ದಾರೆ.

ಇಲ್ಲಿನ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದು, ದೂರಿನನ್ವಯ ಠಾಣೆ ಪೊಲೀಸರು ಪ್ರಶಾಂತ್ ಸಂಬರಗಿ ವಿರುದ್ಧ ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗ ಡ್ರಗ್ಸ್ ಪ್ರಕರಣದಲ್ಲಿ ಪ್ರಶಾಂತ್ ಸಂಬರಗಿ ಅನಗತ್ಯವಾಗಿ ನನ್ನ ಹೆಸರನ್ನು ತಂದಿದ್ದಾರೆ. ಆಧಾರರಹಿತವಾಗಿ ನನ್ನ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದೇನೆ. ಅದರನ್ವಯ ಪ್ರಶಾಂತ್ ಸಂಬರಗಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಝಮೀರ್ ದೂರಿನಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News