ಲಸಿಕೆಯ ಸುರಕ್ಷತೆ ಪ್ರಮುಖ ಆದ್ಯತೆ: ವಿಶ್ವ ಆರೋಗ್ಯ ಸಂಸ್ಥೆ

Update: 2020-09-09 16:41 GMT

ಝೂರಿಕ್ (ಸ್ವಿಟ್ಸರ್‌ಲ್ಯಾಂಡ್), ಸೆ. 9: ಸಂಭಾವ್ಯ ಕೋವಿಡ್-19 ಲಸಿಕೆಯ ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಬುಧವಾರ ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸುತ್ತಿರುವ ಲಸಿಕೆಯ ಅಡ್ಡಪರಿಣಾಮಗಳ ಭೀತಿಯ ಹಿನ್ನೆಲೆಯಲ್ಲಿ ಅದರ ಕ್ಲಿನಿಕಲ್ ಪರೀಕ್ಷೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

‘‘ಲಸಿಕೆಯನ್ನು ಅಭಿವೃದ್ಧಿಪಡಿಸುವ ವೇಗದ ಬಗ್ಗೆ ಮಾತನಾಡುವುದೆಂದರೆ, ಲಸಿಕೆಯ ಗುಣಮಟ್ಟದ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದೆಂದಲ್ಲ’’ ಎಂದು ಸಾಮಾಜಿಕ ಮಾಧ್ಯಮದ ಮೂಲಕ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

‘‘ಲಸಿಕೆ ಅಭಿವೃದ್ಧಿಪಡಿಸುವ ಪ್ರಕ್ರಿಯೆಯು ನಿಯಮಗಳ ಪ್ರಕಾರವೇ ನಡೆಯಬೇಕು. ಜನರಿಗೆ ನೀಡುವ ಔಷಧಗಳು ಮತ್ತು ಲಸಿಕೆಗಳ ವಿಚಾರದಲ್ಲಿ ಸುರಕ್ಷತೆಯು ಪ್ರಧಾನ ವಿಷಯವಾಗಿರುತ್ತದೆ’’ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News