ಬೆಂಗಳೂರಿನಲ್ಲಿ ಕೋವಿಡ್ ಗೆ ಮತ್ತೆ 41 ಮಂದಿ ಬಲಿ; 3,419 ಮಂದಿಗೆ ಪಾಸಿಟಿವ್

Update: 2020-09-09 16:44 GMT

ಬೆಂಗಳೂರು, ಸೆ.6: ನಗರದಲ್ಲಿ ಬುಧವಾರದಂದು 3,419 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 1,564 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 41 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,57,044 ಮಂದಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ 2,307 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,12,536 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 42,200 ಕೊರೋನ ಸೋಂಕಿತರು ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,05,469 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಮಂಗಳವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 15,537 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 18,299 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.

ನಗರದ 4,18,121 ಜನರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತರೆಂದು 5,23,715 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 10,60,813 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.19ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.48ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.71.24ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News