×
Ad

5 ದಿನ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್

Update: 2020-09-10 18:18 IST

 ಉಡುಪಿ, ಸೆ.10: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆ ಯಂತೆ ರಾಜ್ಯದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ.

ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಸೆ.11ಮತ್ತು 12ರಂದು ಭಾರೀ ಮಳೆಯ ರೆಡ್ ಅಲರ್ಟ್ ಹಾಗೂ ಸೆ.13 ಮತ್ತು 14ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆ ಗಳನ್ನು ನೀಡಿದೆ.

ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು, ಈ ಅವಧಿಯಲ್ಲಿ ಮಕ್ಕಳು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ. ಅಗತ್ಯ ಬಿದ್ದಲ್ಲಿ ತುರ್ತು ಸೇವೆಗೆ ಶುಲ್ಕ ರಹಿತ 1077, ಅಥವಾ ದೂರವಾಣಿ ಸಂಖ್ಯೆ: 0820-2574802ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News