ಡ್ರಗ್ಸ್ ದಂಧೆ ಪ್ರಕರಣ: ಐದಕ್ಕೆ ಏರಿದ ಬಂಧಿತರ ಸಂಖ್ಯೆ

Update: 2020-09-10 15:48 GMT

ಬೆಂಗಳೂರು, ಸೆ.10: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಡ್ರಗ್ಸ್ ಜಾಲವನ್ನು ಭೇದಿಸುತ್ತಿರುವ ಸಿಸಿಬಿ ಪೊಲೀಸರು ಮತ್ತೊಬ್ಬ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

ಪ್ರಶಾಂತ್ ರಂಕ ಬಂಧಿತ ಆರೋಪಿ ಎಂದು ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಡ್ರಗ್ ಜಾಲದ ಬಗ್ಗೆ ಕಾಟನ್‍ಪೇಟೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರಂಕ 4ನೆ ಆರೋಪಿಯಾಗಿದ್ದು, ಬೆಂಗಳೂರು ನಿವಾಸಿಯಾದ ಈತ ಉದ್ಯಮಿಯಾಗಿದ್ದಾನೆ.

ಕಾಟನ್‍ಪೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಪ್ರಶಾಂತ್ ರಂಕ ಸೇರಿ ಐದು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News